ಶಿಕ್ಷಕರ ನೆರವಿಗೆ ಮುಂದಾದ ಕಿಚ್ಚ ಸುದೀಪ್

ಬೆಂಗಳೂರು: ಕೊರೋನಾದಿಂದ ಸಂಕಷ್ಟದಲ್ಲಿರುವವರಿಗೆ ಸಿನಿ ತಾರೆಯರು ತಮ್ಮದೇ ಆದ ನೆರವು ನೀಡುತ್ತಿದ್ದು, ನಟ ಕಿಚ್ಚ ಸುದೀಪ್ ಅವರು ಕೂಡ ಸಹಾಯ ಹಸ್ತ ಚಾಚಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಅವರು ನೆರವಾಗುತ್ತಿದ್ದಾರೆ. ಈಗ ಸುದೀಪ್ ಗುರುಗಳಿಗೆ ನೆರವಾಗಲು ಮುಂದಾಗಿದ್ದು, ಖಾಸಗಿ ಶಾಲೆಯ ಶಿಕ್ಷಕರಿಗೆ ತಲಾ ಎರಡು ಸಾವಿರ ರೂಪಾಯಿ ಗೌರವಧನ ನೀಡಲಿದ್ದಾರೆ. ಮೊದಲ ಹಂತದಲ್ಲಿ ಗುರುಗಳಿಗೆ ನಮನ ಕಾರ್ಯಕ್ರಮದಡಿ 50 ಖಾಸಗಿ ಶಾಲಾ ಶಿಕ್ಷಕರಿಗೆ ಸಹಾಯ ಮಾಡಲಿದ್ದು, ಆರ್ಥಿಕ ಸಂಕಷ್ಟದಲ್ಲಿ ಇರುವವರು ಈ 6360334455 ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ.

NEWS DESK

TIMES OF BENGALURU