ಜಲಮಂಡಳಿ ನೀರು ಸೋರಿಕೆ ತಡೆಗೆ ಕ್ರಮ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಂಗಳೂರು ಜಲಮಂಡಳಿಯ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಬೆಂಗಳೂರು ಜಲಮಂಡಳಿಯ ವ್ಯಾಪ್ತಿಯಲ್ಲಿ ಶೇ. 36 ರಷ್ಟಿರುವ ನೀರು ಸೋರಿಕೆಯನ್ನು ಶೇ. 20ಕ್ಕಿಳಿಸುವ ಬಗ್ಗೆ ಕಾರ್ಯತಂತ್ರ ರೂಪಿಸುವಂತೆ ಸಿಎಂ ನಿರ್ದೇಶನ ನೀಡಿದರು.

ನೀರು ಸೋರಿಕೆಯನ್ನು ತಡೆಗಟ್ಟುವ ಕುರಿತು ಇತರ ನಗರಗಳ ಮಾಹಿತಿಯನ್ನೂ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ಈ ಸಂದರ್ಭದಲ್ಲಿ ಸಿಎಂ ಸೂಚಿಸಿದರು. ಬೆಂಗಳೂರು ಜಲ ಮಂಡಳಿಯು ಮಳೆಗಾಲದಲ್ಲಿ ತುರ್ತು ಸಂದರ್ಭ ನಿರ್ವಹಣೆಗಾಗಿ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ಅವರು ಸಭೆಯಲ್ಲಿ ಮಾಹಿತಿ ಪಡೆದರು. ಬೆಂಗಳೂರು ನಗರಕ್ಕೆ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಕೊಳವೆ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದ್ದು, 51 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. 2022 ಡಿಸೆಂಬರ್ ವೇಳೆಗೆ ಉಳಿದ 59 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುವುದು. ಈ ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

NEWS DESK

TIMES OF BENGALURU