ನವದೆಹಲಿ:ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ನಂತರ, ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಸಹ 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು CISCE ಮಂಗಳವಾರ ನಿರ್ಧರಿಸಿದೆ ಎಂದು ಅದರ ಕಾರ್ಯದರ್ಶಿ ಗೆರ್ರಿ ಅರಾಥೂನ್ ತಿಳಿಸಿದ್ದಾರೆ. ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಪರ್ಯಾಯ ಮೌಲ್ಯಮಾಪನ ಮಾನದಂಡಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಅರಾಥೂನ್ ಪಿಟಿಐಗೆ ತಿಳಿಸಿದರು.
NEWS DESK
TIMES OF BENGALURU