ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್

ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಬಿಬಿಎಂಪಿ ಅಧಿಕಾರಿ, ಬಿಬಿಎಂಪಿ ಸಹಾಯಕ ಇಂಜಿನಿಯರ್ ನಿವಾಸ ಮೇಲೆ ದಾಳಿ ಮಾಡಲಾಗಿದೆ. ಕಟ್ಟಡ ಕಾಮಗಾರಿ ಎನ್‍ಒಸಿ ನೀಡಲು 20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮನೆಯಲ್ಲಿ 20 ಲಕ್ಷ ರೂಪಾಯಿ ಹಣ ಪಡೆಯುವಾಗಲೇ ಅಧಿಕಾರಿ ಸಿಕ್ಕಿ ಬಿದ್ದಿದ್ದಾರೆ.

ಬೆಂಗಳೂರಿನ ಅಮೃತ ನಗರದ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಅಲ್ಲದೇ, ಇಂಜಿಯರ್ ಆಪ್ತನ ಮನೆಯ ಮೇಲೆಯೂ ದಾಳಿ ನಡೆಸಲಾಗಿದೆ. ಹಲಸೂರು ಗುಪ್ತ ಲೇಔಟ್ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ.

News Desk
Times Of Bengaluru