ಸ್ಪುಟ್ನಿಕ್ ಲಸಿಕೆ ಉತ್ಪಾದನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ನವದೆಹಲಿ: ದೇಶದಲ್ಲಿ ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸುತ್ತಿರುವ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆ ಸ್ಪುಟ್ನಿಕ್ ವಿ ಲಸಿಕೆ ತಯಾರಿಕೆ ಮತ್ತು ಲಸಿಕೆಯ ವಿಶ್ಲೇಷಣೆ ಮತ್ತು ಪರೀಕ್ಷೆಗೆ ಅನುಮೋದನೆ ನೀಡುವಂತೆ ಡಿಸಿಜಿಐಗೆ ನಿನ್ನೆ ಮನವಿ ಮಾಡಿತ್ತು. ಭಾರತದಲ್ಲಿಯೇ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸಿರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದಿಸಲು ಒಪ್ಪಿಕೆ ನೀಡಲಾಗಿದೆ. ರಷ್ಯಾದ ಮಾಸ್ಕೋದ ಗಮಾಲಿಯಾ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಹಯೋಗದಲ್ಲಿ ಷರತ್ತುಗಳೊಂದಿಗೆ ಲಸಿಕೆ ಉತ್ಪಾದಿಸಲು ಸಿರಂ ಸಂಸ್ಥೆಗೆ ಡಿಸಿಜಿಐ ಅನುಮತಿ ನೀಡಿದೆ.

NEWS DESK

TIMES OF BENGALURU