ಕಾನೂನು ಹೋರಾಟಕ್ಕೆ ಮುಂದಾದ ಜಾರಕಿಹೊಳಿ

ಬೆಂಗಳೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ. ಈ ಆರೋಪ ಹೊತ್ತಿರುವ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಮುಜುಗರ ತಪ್ಪಿಸಲು ಜಾರಕಿಹೊಳಿ ರಾಜೀನಾಮೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ, ರಾಜೀನಾಮೆ ನೀಡದಿರಲು ನಿರ್ಧರಿಸಿರುವ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಕಾನೂನು ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಸಹೋದರ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

News Desk
Times Of Bengaluru