ಪೊಲೀಸ್ ಸ್ಟೇಷನ್‍ಗಳಲ್ಲಿ ಸಿಸಿಟಿವಿ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿಗಳನ್ನ ಅಳವಡಿಸಬೇಕು. ಇದಕ್ಕಾಗಿ 18 ಕೋಟಿ ರೂಪಾಯಿ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಬಸವರಾಜ್ ಬೊಮ್ಮಾಯಿ, ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿಗಳನ್ನ ಅಳವಡಿಸಬೇಕು. ಇದಕ್ಕಾಗಿ 18 ಕೋಟಿ ರೂಪಾಯಿ ನೀಡಲು ಸಂಪುಟ ಸಭೆ ನಿರ್ಧರಿಸಿದೆ. ಈಗಾಗಲೇ 782 ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ, ಉಳಿದ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸಬೇಕಿದೆ ಎಂದರು.

 

News Desk
Times Of Bengaluru