ಬಿಸಿಯೂಟ ನೌಕರರ ಪ್ರತಿಭಟನೆ

ಬೆಂಗಳೂರು : ರಾಜ್ಯದ ವಿವಿಧೆಡೆಯಿಂದ ಆಗಮಿಸಿ ಬಿಸಿಯೂಟ ನೌಕರರು ವೇತನ ಹೆಚ್ಚಳ ಮತ್ತು ಪಿಂಚಣಿ ಜಾರಿ ಮಾಡುವಂತೆ ಒತ್ತಾಯಿಸಿ ನಗರದ ಫ್ರೀಡಂಪಾರ್ಕ್‍ನಲ್ಲಿ ಇಂದು ಪ್ರತಿಭಟನೆ ಕೈಗೊಂಡಿದ್ದಾರೆ.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಗೌರವ ಅಧ್ಯಕ್ಷರಾದ ಎಸ್.ವರಲಕ್ಷ್ಮಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಬಿಸಿಯೂಟ ನೌಕರರಿಗೆ ಸರಿಯಾಗಿ ವೇತನ ಸಿಗುತ್ತಿಲ್ಲ. ಕಳೆದ ನಾಲ್ಕು ತಿಂಗಳಿನಿಂದ ವೇತನ ಸಿಗದೆ ನೌಕರರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.

ಬಿಸಿಯೂಟ ಯೋಜನೆಯಡಿ 1,17,999 ನೌಕರರು ಕಳೆದ 19 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಬಡ ಮಹಿಳೆಯರು, ವಿಚ್ಛೇತರು, ವಿಧವೆಯರು ನೌಕರರಾಗಿದ್ದು, ಈ ಉದ್ಯೋಗವನ್ನೇ ನಂಬಿ ಬದುಕುತ್ತಿದ್ದಾರೆ. ಪ್ರಸ್ತುತ ಬಜೆಟ್‍ನಲ್ಲಿ ಕಡಿತವಾಗಿರುವ 1400 ಕೋಟಿ ಅನುದಾನವನ್ನು ವಾಪಸ್ ಕೊಡಬೇಕು ಮತ್ತು ಬಜೆಟ್‍ನಲ್ಲಿ ಅನುದಾನವನ್ನು ಹೆಚ್ಚಿಸಬೇಕು. ನೂತನ ಶಿಕ್ಷಣ ನೀತಿ ಜಾರಿ ಮಾಡುವಾಗ ಬಿಸಿಯೂಟ ಯೋಜನೆಯನ್ನು ಬಲಗೊಳಿಸಬೇಕು ಎಂದು ಆಗ್ರಹಿಸಿದರು.

News Desk
Times Of Bengaluru