ನನ್ನ ಫೇಸ್ ಬುಕ್ ಅಕೌಂಟ್ ಹ್ಯಾಕ್ ಆಗಿದೆ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು, ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ತಿಳಿದು ಬಂದಿದೆ.

ಇತ್ತೀಚೆಗೆ ಈ ರೀತಿಯ ಆನ್ ಲೈನ್ ಖದೀಮರ ಹಾವಳಿ ಹೆಚ್ಚಾಗಿದ್ದು, ಜನ ಸಾಮಾನ್ಯರು, ಪೊಲೀಸರು, ಹಿರಿಯ, ಕಿರಿಯ ಅಧಿಕಾರಿಗಳು, ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ ಸ್ಟಾಗ್ರಾಂ ಖಾತೆ ತೆರೆಯುವ ಹ್ಯಾಕರ್‍ಗಳು ಹಣಕ್ಕೆ ಬೇಡಿಕೆಯಿಟ್ಟು, ಹಣ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನನ್ನ ಅಕೌಂಟ್ ಹ್ಯಾಕ್ ಆಗಿದೆ. ಹಣ ಕಳುಹಿಸಿ ಎಂದು ಯಾವುದಾದರೂ ಸಂದೇಶಗಳು ಫೇಸ್ ಬುಕ್ ನಲ್ಲಿ ಬಂದರೆ ದಯವಿಟ್ಟು ಹಣ ಕಳುಹಿಸಬೇಡಿ. ನನ್ನ ಅಕೌಂಟ್ ಹ್ಯಾಕ್ ಆಗಿದ್ದರೂ, ನಾನು ಹಣ ಕೇಳುವುದಿಲ್ಲ ಎಂದು ಪೊಸ್ಟ್ ಮಾಡಿದ್ದಾರೆ.

News Desk
Times Of Bengaluru