ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸಾಲು-ಸಾಲು ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಸಾವಿರಾರು ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಹೀಗಾಗಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದ್ದು, ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ಮಾಡುವ ವಾಹನ ಸವಾರರು ಎಚ್ಚರ ವಹಿಸಬೇಕಿದೆ.

ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಟ್ರಾಫಿಕ್ ಜಾಮ್ ಆಗಲಿದೆ. ಹೀಗಾಗಿ ಮೆಜೆಸ್ಟಿಕ್ ಸುತ್ತಮುತ್ತ ಸಂಚರಿಸುವ ವಾಹನ ಸವಾರರು ಮಾರ್ಗ ಬದಲಾಯಿಸಿಕೊಳ್ಳುವುದು ಸೂಕ್ತ. ಇಲ್ಲವೆಂದರೆ ಗಂಟೆಗಟ್ಟಲೇ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿ ಪರಿತಪಿಸಬೇಕಾಗುತ್ತದೆ. ಇಂದು ಪ್ರತಿಭಟನಾಕಾರರು ಸಾವಿರಾರು ಸಂಖ್ಯೆಯಲ್ಲಿ ವಿಧಾನಸೌಧಕ್ಕೆ ಲಗ್ಗೆಯಿಡಲಿದ್ದಾರೆ. ಸಿಐಟಿಯು ಅಡಿಯಲ್ಲಿ ಬರುವ 131 ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರು ಪ್ರತಿಭಟನೆ ಮಾಡಲಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಶಾ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು ಸೇರಿದಂತೆ ರಸ್ತೆ ಸಾರಿಗೆ ನೌಕರರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ. ರೈಲ್ವೆ ನಿಲ್ದಾಣದಿಂದ ವಿಧಾನಸೌಧ ಚಲೋಗೆ ಕರೆ ನೀಡಿದ್ದಾರೆ.

News Desk
Times Of Bengaluru