ಮೇಕ್​ ಇನ್​ ಇಂಡಿಯಾ ಅಲ್ಲ ಮಾರಾಟವಾಗುತ್ತಿರುವ ಇಂಡಿಯಾ

 

ಬೆಂಗಳೂರು: ದೇಶದ ಪ್ರಗತಿ, ನೆಮ್ಮದಿಗಳೆರಡೂ ಆ ದೇಶದ ತೆರಿಗೆ ನೀತಿ ಹೇಗಿದೆ ಎಂಬುದರ ಮೇಲೆ ತೀರ್ಮಾನವಾಗುತ್ತದೆ. ಸದ್ಯ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ತೆರಿಗೆ ನೀತಿಯಿಂದ ದೇಶದ ಮಧ್ಯಮ ಮತ್ತು ದುಡಿಯುವ ವರ್ಗಗಳ ಮೇಲೆ ಬೀರುತ್ತಿರುವ ಪರಿಣಾಮಗಳ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಜನರ ಮೇಲಿನ ತೆರಿಗೆ ಹೊರೆ ಕಡಿಮೆ ಇದ್ದರೆ ಜನ ನೆಮ್ಮದಿಯಿಂದಿರುತ್ತಾರೆ. ಆದರೆ ಮೋದಿಯವರ ಸರ್ಕಾರದ ನೀತಿಗಳಿಂದಾಗಿ ಜನರ ಮೇಲಿನ ತೆರಿಗೆ ಹೊರೆ ಹೆಚ್ಚಾಗುತ್ತಿದೆ. ಅಂದರೆ, 15 ನೇ ಹಣಕಾಸು ಆಯೋಗವು ಅಂದಾಜು ಮಾಡಿರುವಂತೆ 2024-25 ಕ್ಕೆ ಕಾರ್ಪೊರೇಟ್ ತೆರಿಗೆ ಸಂಗ್ರಹದ ಗುರಿ ಕೇವಲ ಶೇ. 34.75 ರಷ್ಟು ಹೆಚ್ಚಾಗುತ್ತದೆ. ಅದೇ ಸಂದರ್ಭದಲ್ಲಿ ಜನರು ಪಾವತಿಸುವ ಜಿ.ಎಸ್​.ಟಿ ಯು ಶೇ.45.48 ರಷ್ಟು ಹಾಗೂ ಪೆಟ್ರೋಲ್, ಡೀಸೆಲ್ ಮುಂತಾದವುಗಳ ಮೇಲೆ ವಿಧಿಸುತ್ತಿರುವ ಸುಂಕಗಳು ಶೇ. 62 ರಷ್ಟು ಹೆಚ್ಚಾಗುತ್ತವೆ. ಅಂದರೆ ಜನರು ಇನ್ನಷ್ಟು ಅನುಭವಿಸಬೇಕಾಗಿದೆ ಎಂದು ಅರ್ಥವಾಗುತ್ತದೆ ಎಂದು ವಿವರಿಸಿದ್ದಾರೆ. ಯಾವ ದೇಶ ದುಡಿಯುವ ಕೈಗಳಿಗೆ ಉದ್ಯೋಗ ನೀಡುತ್ತದೋ ಅಂಥಹ ದೇಶದ ಅಭಿವೃದ್ಧಿ ಚೆನ್ನಾಗಿರುತ್ತದೆ. ಇಲ್ಲದಿದ್ದರೆ ಆ ದೇಶದ ಆರ್ಥಿಕತೆ ವಿನಾಶದ ಹಾದಿ ಹಿಡಿಯುತ್ತದೆ. ಇದು ಮೇಕ್​ ಇನ್​ ಇಂಡಿಯಾ ಅಲ್ಲ ಮಾರಾಟವಾಗುತ್ತಿರುವ ಇಂಡಿಯಾ ಎಂದು ಹೇಳಿದ್ದಾರೆ.

NEWS DESK

TIMES OF BENGALURU