ಸಚಿವ ಸ್ಥಾನಕ್ಕೆ ಡಿವಿ ಸದಾನಂದ ಗೌಡ ರಾಜೀನಾಮೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಪುನಾರ್ರಚನೆಯಾಗುವ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವರಾಗಿದ್ದ ಸಂತೋಷ್ ಗಂಗ್ವಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ದಿಬೇಶ್ರೀ ಚೌದರಿ ಸೇರಿದಂತೆ ಹಲವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿವಿ ಸದಾನಂದ ಗೌಡ ಅವರೂ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಥಾವರ್ ಚಂದ್ ಗೆಹ್ಲೋಟ್‍ರನ್ನು ನಿನ್ನೆ ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಇಂದು ಅವರು ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

NEWS DESK

TIMES OF BENGALURU