ಬೆಂಗಳೂರು: ಕೊರೋನಾ ಆತಂಕದ ನಡುವೆಯೇ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸಜ್ಜಾಗಿದೆ. ಅದರಂತೆ ಜು.19 ಮತ್ತು 22ರಂದು ಪರೀಕ್ಷೆ ನಡೆಯಲಿವೆ. ಶುಲ್ಕ ಪಾವತಿಸದ ಕಾರಣ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲು ಯಾವುದೇ ವಿದ್ಯಾರ್ಥಿಗೆ ಪ್ರವೇಶ ಪತ್ರ (ಹಾಲ್ ಟಿಕೆಟ್) ನಿರಾಕರಿಸಬಾರದೆಂದು ಶಿಕ್ಷಣ ಇಲಾಖೆ ಖಚಿತಪಡಿಸುತ್ತದೆ ಎಂದು ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ಹೇಳಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಯಾವುದೇ ತೊಂದರೆಗಳನ್ನು ಎದುರಿಸದಂತೆ ಬ್ಲಾಕ್ ಶಿಕ್ಷಣ ಅಧಿಕಾರಿಗಳು(ಬಿಇಒ) ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಶುಲ್ಕ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಯಾವುದೇ ವಿದ್ಯಾರ್ಥಿಗೆ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನಿರಾಕರಿಸಲಾಗುವುದಿಲ್ಲ ಎಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ (ಕೆಎಸ್ಇಇಬಿ) ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಅವರು ಎಲ್ಲಾ ಹಾಲ್ ಟಿಕೆಟ್ಗಳನ್ನು ಜೂನ್ 29ರಂದು ಕೆಎಸ್ಇಇಬಿ ಪೋರ್ಟಲ್ಗೆ ಅಪಲೋಡ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸುವ ಸುತ್ತೋಲೆ ಹೊರಡಿಸಿದ್ದಾರೆ. ಸಂಸ್ಥೆಗಳ ಮುಖ್ಯಸ್ಥರು ಪ್ರತಿಯೊಂದು ಶಾಲೆಗೂ ಒದಗಿಸಲಾಗಿರುವ ಲಾಗಿನ್ ಕೋಡ್ ಬಳಸಿ ಅವುಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
NEWS DESK
TIMES OF BENGALURU